You don't have javascript enabled. Please Enabled javascript for better performance.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

ದೇಶದಲ್ಲಿ ಯುವ ಸಬಲೀಕರಣ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯೋನ್ಮುಖವಾಗಿರುವ ರಾಜ್ಯಗಳಲ್ಲಿ ಕರ್ನಾಟಕವೂ ಸಹ ಒಂದಾಗಿರುತ್ತದೆ. ಕರ್ನಾಟಕ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕ್ರೀಡಾ ಸಂಸ್ಥೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಮುಖಾಂತರ ನಗರ ಮತ್ತು ಗ್ರಾಮಾಂತರ ಪ್ರದೇಶದ ಯುವಜನರು ಮತ್ತು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳಲ್ಲದ ಯುವಜನರ ಸಾಮಾಜಿಕ, ಆರ್ಥಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಅಗತ್ಯವಾದ ಅವಶ್ಯಕತೆಗಳನ್ನು ಒದಗಿಸುವಲ್ಲಿ ಕಾರ್ಯೋನ್ಮುಖವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನರ ಏಳಿಗೆಗಾಗಿ ಸೂಕ್ತ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವತಃ ಅನುಷ್ಠಾನಗೊಳಿಸುತ್ತಿರುವುದಲ್ಲದೆ, ಯುವಜನರಿಗೆ ಮತ್ತು ಯುವಜನ ಸಂಸ್ಥೆಗಳಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಿದೆ.