ಕೌಶಲ್ಯ ಭಾರತ ಸ್ಪರ್ಧೆ 2023
ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯು ಸುಸ್ಥಿರ ಜೀವನೋಪಾಯವನ್ನು ...
ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯು ಸುಸ್ಥಿರ ಜೀವನೋಪಾಯವನ್ನು ಉತ್ತೇಜಿಸುವ ಗುರಿ ಹೊಂದಿದೆ. ಇಲಾಖೆಯು ವಿವಿಧ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದ್ದು, ಸ್ಟಾರ್ಟ್ ಅಪ್ ಇಂಡಿಯಾ ಉಪಕ್ರಮವನ್ನು ಮುನ್ನಡೆಸಿದೆ.
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC), ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಯುವಕರ ಕ್ರಿಯಾಶೀಲತೆಯನ್ನು ಹೊರ ತರುವ ಗುರಿಯನ್ನು ಹೊಂದಿದೆ. ರಾಜ್ಯದಾದ್ಯಂತ ಯುವಕರನ್ನು ಕೌಶಲ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ಸಬಲೀಕರಣಗೊಳಿಸಲು ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಇಲಾಖೆಯು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದೆ. ಕೈಗಾರಿಕೆಗಳಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸಲು, ಮತ್ತು ಮಹಿಳಾ ಉದ್ಯಮಿಗಳ ನವೋದ್ಯಮಗಳ ಕಲ್ಪನೆಗಳನ್ನು ಪ್ರಸ್ತುತಪಡಿಸಲು ಅವಕಾಶ ಕಲ್ಪಿಸುತ್ತದೆ. ಆಯ್ದ ಮಹಿಳಾ ಉದ್ಯಮಿಗಳು ಸರ್ಕಾರದಿಂದ ಸೂಕ್ತ ಧನಸಹಾಯವನ್ನು ಪಡೆಯುತ್ತಾರೆ ಮತ್ತು ಗೌರವಾನ್ವಿತ ಸಂಸ್ಥೆಗಳಲ್ಲಿ ಒಂದು ತಿಂಗಳ ವಿಶೇಷ ಇಂಟರ್ನ್‌ಶಿಪ್ ಪಡೆಯಲು ಅವಕಾಶವಿರುತ್ತದೆ. ಸಂಘ-ಸಂಸ್ಥೆಗಳ ಕಾರ್ಯನಿರ್ವಹಣೆ ಕುರಿತು ಮಾರ್ಗದರ್ಶನವನ್ನು ಪಡೆಯಬಹುದು.
ನಿಯಮ ಮತ್ತು ಷರತ್ತುಗಳು
ಇಲ್ಲಿ ಕ್ಲಿಕ್ ಮಾಡಿ
ಭಾಗವಹಿಸುವವರು ಯಾವುದೇ ಪ್ರಶ್ನೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆಯನ್ನು +91 82778 95930 ಸಂಪರ್ಕಿಸಿ
ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ